
ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ ವುಡ್ ನ ಬೇಡಿಕೆಯ ನಟಿಯಾಗಿರುವ ನಟಿ ಸೋನಾಲ್ ಮೊಂಟೆರೊ ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ.
ಇತ್ತೀಚೆಗೆ ಸೋನಾಲ್ ಮೊಂಟೆರೊ ಹಸಿರು ಬಣ್ಣದ ಸೀರೆಯಲ್ಲಿ ಫೋಟೋಶೂಟ್ ಮಾಡಿಸಿದ್ದು, ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಒಂದೊಂದಾಗಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಹಾಗೂ ಕಮೆಂಟ್ಸ್ ಗಳು ಬಂದಿವೆ.
ಸಿನಿಮಾ ವಿಚಾರಕ್ಕೆ ಬಂದರೆ ಸೋನಾಲ್ ಮೊಂಟೆರೊ ಅಭಿನಯಿಸುತ್ತಿರುವ ‘ಬುದ್ಧಿವಂತ2’ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ‘ಮಾರ್ಗರೆಟ್ ಲವರ್ ಆಫ್ ರಾಮಾಚಾರಿ’ ಹಾಗೂ ‘ಶುಗರ್ ಫ್ಯಾಕ್ಟರಿ’ ಚಿತ್ರದ ಶೂಟಿಂಗ್ ನಲ್ಲಿ ಸೋನಾಲ್ ಮೊಂಟೆರೊ ನಿರತರಾಗಿದ್ದಾರೆ.


