
ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ನಟ ವಿನಯ್ ರಾಜಕುಮಾರ್ ಅಭಿನಯದ ಒಂದು ಸರಳ ಪ್ರೇಮ ಕಥೆ ಚಿತ್ರದ ಮತ್ತೊಬ್ಬ ನಾಯಕಿಯಾದ ಸ್ವಾತಿಷ್ಟ ಅವರ ಪಾತ್ರವನ್ನು ಇದೇ ಜನವರಿ 22ಕ್ಕೆ ರಿವೀಲ್ ಮಾಡಲಿದ್ದಾರೆ. ಈ ಕ್ಯಾರೆಕ್ಟರ್ ಟೀಸರ್ ಅನ್ನು ನಟ ವಿಜಯ್ ಸೇತುಪತಿ ಅವರ ಕೈಯಲ್ಲಿ ಲಾಂಚ್ ಮಾಡಿಸಲಿದ್ದಾರೆ.
ಸಿಂಪಲ್ ಸುನಿ ನಿರ್ದೇಶನದ ಈ ಚಿತ್ರದಲ್ಲಿ ವಿನಯ್ ರಾಜಕುಮಾರ್, ಮಲ್ಲಿಕಾಸಿಂಗ್ ಮತ್ತು ಸ್ವಾತಿಷ್ಟ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ರಾಮ್ ಮೂವೀಸ್ ಬ್ಯಾನರ್ ನಡಿ ಮೈಸೂರು ರಮೇಶ್ ನಿರ್ಮಾಣ ಮಾಡಿದ್ದಾರೆ. ವೀರ್ ಸಮರ್ಥ್ ಸಂಗೀತ ಸಂಯೋಜನೆ ನೀಡಿದ್ದಾರೆ. ಆದಿ ಸಂಕಲನ ಮತ್ತು ಕಾರ್ತಿಕ್ ಶರ್ಮ ಛಾಯಾಗ್ರಹಣವಿದೆ. ಮುಂದಿನ ತಿಂಗಳು ಫೆಬ್ರವರಿ 8ರಂದು ಈ ಸಿನಿಮಾ ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ.
