ನವದೆಹಲಿ: ಕೋವಿಶೀಲ್ಡ್ ಲಸಿಕೆ ಉತ್ಪಾದನೆ ಕಡಿತಗೊಳಿಸಲು ತೀರ್ಮಾನಿಸಲಾಗಿದೆ. ಮುಂದಿನ ವಾರದಿಂದ ಉತ್ಪಾದನೆಯನ್ನು ಶೇಕಡ 50 ರಷ್ಟು ಕಡಿತಗೊಳಿಸಲಾಗುವುದು ಎಂದು ಸೀರಂ ಕಂಪನಿಯ ಸಿಇಒ ಆದಾರ್ ಪೂನಾವಾಲಾ ಹೇಳಿದ್ದಾರೆ.
ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕಂಪನಿಯ ಕೋವಿಶೀಲ್ಡ್ ಲಸಿಕೆ ಉತ್ಪಾದನೆಯನ್ನು ಕಡಿಮೆ ಮಾಡಲಾಗುತ್ತದೆ. ಲಸಿಕೆ ಪೂರೈಸುವಂತೆ ಕೇಂದ್ರ ಸರ್ಕಾರ ಮನವಿ ಮಾಡಿಲ್ಲ. ಹೀಗಾಗಿ ಮುಂದಿನ ವಾರದಿಂದ ಉತ್ಪಾದನೆಯಲ್ಲಿ ಶೇಕಡ 50ರಷ್ಟು ಕಡಿತಗೊಳಿಸಲಾಗುವುದು. ಪ್ರಸ್ತುತ ತಿಂಗಳಿಗೆ 25 ಕೋಟಿ ಲಸಿಕೆ ಉತ್ಪಾದನೆ ಮಾಡಲಾಗುತ್ತಿದೆ. ಬೇಡಿಕೆಗಿಂತ ಹೆಚ್ಚಾಗಿ ಲಸಿಕೆ ಪೂರೈಕೆ ಹಿನ್ನೆಲೆಯಲ್ಲಿ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗುವುದು ಎನ್ನಲಾಗಿದೆ.
ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಸಿಇಒ ಆದಾರ್ ಪೂನಾವಾಲಾ, ಕೋವಿಡ್ -19 ಲಸಿಕೆ ಕೋವಿಶೀಲ್ಡ್ ಪೂರೈಕೆಗೆ ಕೇಂದ್ರದಿಂದ ಯಾವುದೇ ಆದೇಶಗಳಿಲ್ಲ. ಮುಂದಿನ ವಾರದಿಂದ ಉತ್ಪಾದನೆಯನ್ನು ಕನಿಷ್ಠ 50 ಪ್ರತಿಶತದಷ್ಟು ಕಡಿಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.