alex Certify ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಗೆ 23 ಗ್ರಾಮಗಳ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಗೆ 23 ಗ್ರಾಮಗಳ ಸೇರ್ಪಡೆ

ಶಿವಮೊಗ್ಗ: ಗೋವಿಂದಾಪುರ ಆಶ್ರಯ ಮನೆಗಳಿಗೆ ಮೂಲ ಸೌಕರ್ಯ ಒದಗಿಸುವ ಸಂಬಂಧ ನ್ಯೂನ್ಯತೆಗಳ ಪಟ್ಟಿಯನ್ನು ತಮಗೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಆಯುಕ್ತರಿಗೆ ತಿಳಿಸಿದ್ದಾರೆ.

ಶುಕ್ರವಾರ ಮಹಾನಗರಪಾಲಿಕೆಯಲ್ಲಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ಮಾತನಾಡಿ, ಗೋವಿಂದಾಪುರ ಆಶ್ರಯ ಯೋಜನೆಯಡಿ 40 ಎಕರೆಯಲ್ಲಿ ಒಟ್ಟು 3000 ಮನೆಗಳು ಮಂಜೂರಾಗಿದ್ದು, 624 ಮನೆಗಳನ್ನು ಈಗಾಗಲೇ ಸಂಪೂರ್ಣಗೊಳಿಸಿ 225 ಫಲಾನುಭವಿಗಳಿಗೆ ಮನೆಗಳನ್ನು ಹಸ್ತಾಂತರಿಸಲಾಗಿದೆ. ಉಳಿದ 399 ಮನೆಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಸಾಲ ಪ್ರಕ್ರಿಯೆ ನಡೆಯುತ್ತಿದೆ. ಫಲಾನುಭವಿಗಳಿಗೆ ಬ್ಯಾಂಕ್‌ನಿಂದ ಸಾಲ ಮಂಜೂರಾದ ತಕ್ಷಣ ಹಸ್ತಾಂತರಿಸಲಾಗುವುದು. 648 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು, 1728 ಮನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ಶಾಸಕಿ ಬಲ್ಕೀಶ್ ಬಾನು ಮಾತನಾಡಿ, ಮನೆಗಳನ್ನು ಹಸ್ತಾಂತರಿಸಿದ್ದರೂ ಅಲ್ಲಿ ಮೂಲ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್, ಇತರೆ ಸೌಲಭ್ಯಗಳೇ ಇಲ್ಲ. ಇದನ್ನೆಲ್ಲ ಶೀಘ್ರವಾಗಿ ಒದಗಿಸುವಂತೆ ತಿಳಿಸಿದರು.

ಶಾಸಕ ಚನ್ನಬಸಪ್ಪ ಮಾತನಾಡಿ ಪಾಲಿಕೆ ವತಿಯಿಂದ ಈ ವಸತಿ ಯೋಜನೆಗೆ 25 ಕೋಟಿ ರೂ. ನೀಡಬೇಕಿದ್ದು, ಈವರೆಗೆ 9 ಕೋಟಿ ರೂ. ನೀಡಲಾಗಿದೆ. ಹಿಂದಿನ ಸಭೆಯಲ್ಲಿ ಆಯುಕ್ತರು ಇತರೆ ಹೆಡ್‌ನಲ್ಲಿ ಉಳಿಕೆ ಹಣವನ್ನು ನೀಡುವುದಾಗಿ ತಿಳಿಸಿದ್ದರು. ಅಂತೆಯೇ ಉಳಿದ ಹಣ ನೀಡುವಂತೆ ಹೇಳಿದ್ದಾರೆ.

ನೀರು, ಯುಜಿಡಿ, ವಿದ್ಯುತ್ ಇತರೆ ಮೂಲ ಸೌಕರ್ಯಗಳ ಕುರಿತು ಯೋಜನೆಯಲ್ಲಿ ಮೊದಲೇ ವ್ಯವಸ್ಥೆ ಮಾಡಬೇಕಿತ್ತು. ಫಲಾನುಭವಿಗಳ ವಂತಿಗೆಯೂ ಹೆಚ್ಚಾಗಿದ್ದು, ಅವರಿಗೆ ಹೊರೆಯಾಗಿದೆ. 260 ಕೋಟಿ ರೂ. ಮೊತ್ತದಷ್ಟು ದೊಡ್ಡ ಯೋಜನೆಯನ್ನು ಸಮರ್ಪಕವಾಗಿ ಯೋಜಿಸಬೇಕಿತ್ತು. ಅದು ಆಗಿಲ್ಲ. ಇದೀಗ ನ್ಯೂನ್ಯತೆಗಳ ಸಂಪೂರ್ಣ ವರದಿ ತಕ್ಷಣ ನೀಡಿ. ತುರ್ತಾಗಿ ಅವಶ್ಯಕವಾಗಿ ಆಗಬೇಕಿರುವ ಕೆಲಸಗಳ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳ ಮೂಲಕ ತಮಗೆ ಸೋಮವಾರದ ಒಳಗೆ ವರದಿ ನೀಡಿ. ಸರ್ಕಾರದಿಂದ ಅನುದಾನ ತರುವ ಪ್ರಯತ್ನ ಮಾಡುತ್ತೇನೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ನಗರದ ಅಲ್ಲಮಪ್ರಭು ಮೈದಾನದಲ್ಲಿ ಜಿಲ್ಲಾ, ರಾಜ್ಯ ಮಟ್ಟದ ಕಾರ್ಯಕ್ರಮಗಳು ಜರುಗುವಂತೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಯೋಜನೆ ರೂಪಿಸಲು ಕ್ರಿಯಾಯೋಜನೆ ಸಿದ್ದಪಡಿಸಲಾಗುವುದು.  ಮಹಾನಗರಪಾಲಿಕೆ ವ್ಯಾಪ್ತಿಯ ಕೆರೆ ಮತ್ತು ಉದ್ಯಾನಗಳ ನಿರ್ವಹಣೆ ಸಂಬಂಧಿಸಿದಂತೆ ಮಾಹಿತಿಯನ್ನು ತಮಗೆ ನೀಡುವಂತೆ ತಿಳಿಸಿದ ಸಚಿವರು, ಪಾಲಿಕೆ ವ್ಯಾಪ್ತಿಗೆ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಸ್ಥಳೀಯ ಪ್ರದೇಶ ಅಭಿವೃದ್ದಿ ವ್ಯಾಪ್ತಿಯಲ್ಲಿ ಹೊಸದಾಗಿ 23 ಗ್ರಾಮಗಳನ್ನು ಸೇರ್ಪಡೆಗೊಳಿಸುವ ವಿಷಯ ಪರಿಶೀಲನಾ ಹಂತದಲ್ಲಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...