ಬೆಂಗಳೂರು: ಡೆಂಘೀ ಪರೀಕ್ಷೆಗೆ ನಿಗದಿಗಿಂತ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ಬೆಂಗಳೂರಿನ ವಿವಿಧೆಡೆಯ 22 ಲ್ಯಾಬ್ ಗಳಿಗೆ ಆರೋಗ್ಯ ಇಲಾಖೆಯಿಂದ ನೋಟಿಸ್ ನೀಡಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆಪಿಎಂಇ ನೋಡಲ್ ಅಧಿಕಾರಿಗಳ ತಂಡ, ಬೆಂಗಳೂರು ನಗರ ಜಿಲ್ಲೆ ಸೇರಿ ಉತ್ತರ, ದಕ್ಷಿಣ, ಪೂರ್ವ ಹಾಗೂ ಆನೇಕಲ್ ತಾಲೂಕು ವ್ಯಾಪ್ತಿಯಲ್ಲಿ 31 ಖಾಸಗಿ ಆಸ್ಪತ್ರೆ ಮತ್ತು ಲ್ಯಾಬ್ ಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಿದ್ದು, 22 ಲ್ಯಾಬ್ ಗಳಲ್ಲಿ ನಿಗದಿಗಿಂತ ಹೆಚ್ಚು ಶುಲ್ಕ ಪಡೆಯುತ್ತಿರುವುದು ಪತ್ತೆಯಾಗಿದೆ.
ಇವುಗಳಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ ಮತ್ತು ಕೆಪಿಎಂಇ ನಿಯಮದಡಿ ನೋಟಿಸ್ ನೀಡಲಾಗಿದೆ. ಹೆಚ್ಚಿನ ಹಣ ವಸೂಲಿ ಮಾಡಿದ್ದಲ್ಲಿ ಸಾರ್ವಜನಿಕರು ಜಿಲ್ಲಾ ಆರೋಗ್ಯ ಇಲಾಖೆ 94498 43037 ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ದೂರು ನೀಡಬಹುದು ಎಂದು ತಿಳಿಸಲಾಗಿದೆ.