ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ತಲೆದಂಡವಾಗಿದ್ದು, ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಪಿಎಸ್ಐ ನೇಮಕಾತಿ ಅಕ್ರಮ ಅಮೃತ್ ಪೌಲ್ ಕಾಲದಲ್ಲಿಯೇ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಪ್ರಕರಣವನ್ನು ಈಗಾಗಲೇ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದ್ದು, ಅಕ್ರಮವಾಗಿ ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆ ಬರೆದ ಹಲವು ಅಭ್ಯರ್ಥಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದೆ.
BIG NEWS: ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ
ಈ ಬೆಳವಣಿಗಳ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಪೌಲ್ ಅವರನ್ನು ಆಂತರಿಕ ಭದ್ರತಾ ದಳದ ಎಡಿಜಿಪಿಯಾಗಿ ವರ್ಗ ಮಾಡಲಾಗಿದ್ದು, ಪೌಲ್ ಜಾಗಕ್ಕೆ ಅಪರಾಧ, ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿಯಾಗಿ ಆರ್. ಹಿತೇಂದ್ರ ಅವರನ್ನು ನೇಮಕ ಮಾಡಿ ಹೆಚ್ಚುವರಿ ಹೊಣೆ ನೀಡಲಾಗಿದೆ.