
ಡೆಡ್ಲಿ ಸೋಮ ಖ್ಯಾತಿಯ ಆದಿತ್ಯ ಅಭಿನಯದ ಬಹು ನಿರೀಕ್ಷಿತ ‘ಕಾಂಗರೂ’ ಚಿತ್ರ ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದ್ದು, ಸಿನಿಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಈ ಸಿನಿಮಾ ತನ್ನ ಟ್ರೈಲರ್ ಮತ್ತು ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.
ಕಿಶೋರ್ ಮೇಘಳ ಮನೆ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಆದಿತ್ಯ ಮತ್ತು ರಂಜನಿ ರಾಘವನ್ ಪ್ರಮುಖ ಪಾತ್ರದಲ್ಲಿದ್ದಾರೆ. ಕರಿಸುಬ್ಬು ನಾಗೇಂದ್ರ, ಗೌತಮ್, ಶಿವಮಣಿ, ಸ್ಪಂದನ ಪ್ರಸಾದ್, ಸುಬ್ಬಲಕ್ಷ್ಮಿ, ಅಶ್ವಿನ್ ಹಾಸನ್ ಪ್ರಶಾಂತ್ ನಟನ, ಉಳಿದ ಪಾತ್ರವರ್ಗದಲ್ಲಿದ್ದಾರೆ. ಅರ್ಜುನ್ ಕಿಟ್ಟು ಸಂಕಲನ, ಉದಯಲೀಲಾ ಛಾಯಾಗ್ರಹಣ, ಬಂಡೆ ಚಂದ್ರು ಸಾಹಸ ನಿರ್ದೇಶನವಿದೆ. ಚನ್ನಕೇಶವ, ನರಸಿಂಹಮೂರ್ತಿ, ಚಕ್ರಬಾವಿ, ರಮೇಶ್ ಬಂಡೆ, ಸ್ವಾಮಿ ಮತ್ತು ಕೆಜಿಆರ್ ಗೌಡ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ.