ಬೆಂಗಳೂರು : ಜೈನಮುನಿ ಹಾಗೂ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣದ ಬಗ್ಗೆ ಸದನದಲ್ಲಿ ಇಂದು ದಿನವಿಡೀ ಚರ್ಚೆ ನಡೆದಿದ್ದು, ಎಲ್ಲಾ ಚರ್ಚೆ, ವಾದಗಳ ಬಳಿಕ ವಿಧಾನಸಭೆ ಕಲಾಪವನ್ನು ನಾಳೆ ಬೆಳಗ್ಗೆ 10:30 ಕ್ಕೆ ಮುಂದೂಡಲಾಗಿದೆ.
ಸ್ಪೀಕರ್ ಯು.ಟಿ ಖಾದರ್ ಕಲಾಪವನ್ನು ಕಲಾಪವನ್ನು ನಾಳೆ ಬೆಳಗ್ಗೆ 10:30 ಕ್ಕೆ ಮುಂದೂಡಿದ್ದು, ನಾಳೆ ಜೈನಮುನಿ ಹಾಗೂ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣದ ಬಗ್ಗೆ ಚರ್ಚೆ ಮುಂದುವರೆಯಲಿದೆ.
ಜೈನಮುನಿ ಹತ್ಯೆ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರು ಸಿಬಿಐ ತನಿಖೆಗೆ ಪ್ರಕರಣ ವಹಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡನೀಯ, ಇದು ಸಾಮಾನ್ಯ ಕೊಲೆ ಎಂಬಂತೆ ಸರ್ಕಾರ ಭಾವಿಸಿದಂತಿದೆ. ಸ್ಥಳೀಯ ಪೊಲೀಸರು ಸಾಮಾನ್ಯ ಪ್ರಕರಣ ಎಂಬಂತೆ ತನಿಖೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನಗಳಿವೆ. ಹಾಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು. ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ ಬಿಜೆಪಿ ಇತರ ಸದಸ್ಯರು ಧ್ವನಿಗೂಡಿಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಯಾವ ಷಡ್ಯಂತ್ರಕ್ಕೂ ಅವಕಾಶ ಕೊಡಲ್ಲ. ಯಾರ ಪ್ರಭಾವಕ್ಕೂ ಮಣಿಯಲ್ಲ. ಜೈನಮುನಿ ಹತ್ಯೆ ಕೇಸ್ ಸಿಬಿಐ ತನಿಖೆಗೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.ಸಿಎಂ ಹೇಳಿಕೆಗೆ ತೃಪ್ತರಾಗದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ವಿಧಾನಸಭೆಯಲ್ಲಿ ಜೈನಮುನಿ ಹತ್ಯೆ ಪ್ರಕರಣ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಸದಸ್ಯರು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದಾರೆ.ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಇದೊಂದು ಸಾಮಾನ್ಯ ವ್ಯಕ್ತಿಯ ಕೊಲೆಯಲ್ಲ, ಪೊಲೀಸರು ಈ ರೀತಿ ಭಾವಿಸಿದ್ದಾರೆ. ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನಗಳಿವೆ ಸೂಕ್ತ ತನಿಖೆಗೆ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಧ್ವನಿಗೂಡಿಸಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ನಮಗೆ ಪೊಲೀಸರ ಸಾಮರ್ಥ್ಯದ ಬಗ್ಗೆ ಆಕ್ಷೇಪ ಇಲ್ಲ. ಆದರೆ ಕೆಲವೊಮ್ಮೆ ಬೇರೆ ಒತ್ತಡ ಬಂದಾಗ ಏನೂ ಮಾಡಲು ಆಗುವುದಿಲ್ಲ ಎಂದರು.ಅರಗ ಜ್ಞಾನೇಂದ್ರ ಹೇಳಿಕೆಗೆ ಗರಂ ಆದ ಸಿಎಂ ಸಿದ್ದರಾಮಯ್ಯ, ಅರಗ ಜ್ಞಾನೇಂದ್ರ ಅವರೇ ನೀವು ಗೃಹ ಸಚಿವರಾಗಿ ಕೆಲಸ ಮಾಡಿದ್ದೀರಿ. ಒತ್ತಡಕ್ಕೆ ಏನೋ ನಡೆದು ಬಿಡುತ್ತದೆ ಅಂದರೆ ಏನು? ಆ ರೀತಿ ನಿಮ್ಮ ಅವಧಿಯಲ್ಲಿ ಇತ್ತೇನ್ರೀ? ಎಂದು ಗುಡುಗಿದರು. ಯಾರ ಪ್ರಭಾವಕ್ಕೂ ಮಣಿಯುವ ಪ್ರಶ್ನೆ ಇಲ್ಲ, ನಿಸ್ಪಕ್ಷಪಾತವಾಗಿ ತನಿಖೆ ನಡೆಯುತ್ತದೆ ಎಂದು ಹೇಳಿದರು.