alex Certify ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಏ. 18, 19ರ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಏ. 18, 19ರ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವತಿಯಿಂದ ಏಪ್ರಿಲ್ 18 ಮತ್ತು 19ರಂದು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ http://kea.nic.in ನಲ್ಲಿ ಯುಜಿಸಿಇಟಿ- 24 ಲಿಂಕ್ ಮೇಲೆ ಕ್ಲಿಕ್ ಮಾಡಿ ತಮ್ಮ ಅರ್ಜಿಯ ಸಂಖ್ಯೆ, ಹೆಸರು, ಜನ್ಮ ದಿನಾಂಕ ನಮೂದಿಸುವ ಮೂಲಕ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಪ್ರಸಕ್ತ ಸಾಲಿನ ಸಿಇಟಿಗೆ 3.28 ಲಕ್ಷ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದು, ಏಪ್ರಿಲ್ 18, 19ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಏಪ್ರಿಲ್ 20ರಂದು ಕನ್ನಡ ಭಾಷಾ ಪರೀಕ್ಷೆಗೂ ಈ ಪ್ರವೇಶ ಪತ್ರ ಅನ್ವಯವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...