ಕಾರವಾರ: ರಾಜ್ಯದ 200 ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಿ ವರ್ಷಾಂತ್ಯದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಕಾನೂನು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 25,000 ಸ್ಮಾರಕಗಳಿವೆ. ಅವುಗಳ ದತ್ತು ಪಡೆದುಕೊಳ್ಳಲು ಚಾಲನೆ ನೀಡಲಾಗಿದ್ದು, ಪ್ರಸಕ್ತ ವರ್ಷದಲ್ಲಿ 200 ಸ್ಮಾರಕಗಳನ್ನು ದತ್ತು ನೀಡಲಾಗುವುದು ಎಂದು ಹೇಳಿದ್ದಾರೆ.
ಸಾಹಸ ಪ್ರವಾಸೋದ್ಯಮ, ಇಕೋ ಟೂರಿಸಂಗೆ ಆದ್ಯತೆ ನೀಡಲಾಗುತ್ತದೆ. ಹತ್ತು ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ವ್ಯವಸ್ಥೆ ಮಾಡಲಾಗುವುದು. ಶೀಘ್ರವೇ ಹೊಸ ಪ್ರವಾಸೋದ್ಯಮ ನೀತಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದಾರೆ.