ಮೈಸೂರು : ರಾಜ್ಯದಲ್ಲಿ ಇಂದು ಆಯುಧಪೂಜೆ ಸಡಗರ ಸಂಭ್ರಮ ಮನೆ ಮಾಡಿದ್ದು, ಅರಮನೆಯಲ್ಲಿ ಆಯುಧ ಪೂಜೆ ನಡೆಯುತ್ತಿದೆ.
ಇಂದು ಸಂಜೆ 4 ಗಂಟೆಗೆ ಮೈಸೂರಿನಲ್ಲಿ ವೈಮಾನಿಕ ಪ್ರದರ್ಶನ ನಡೆಯಲಿದ್ದು, ವೈಮಾನಿಕ ಪ್ರದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ರಾತ್ರಿ 7 ಗಂಟೆಗೆ ಪಂಜಿನ ಕವಾಯತು ರಿಹರ್ಸಲ್ ನಡೆಯಲಿದೆ.
ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಸಂಭ್ರಮ ಮನೆ ಮಾಡಿದ್ದು, ದೇಶ ವಿದೇಶಗಳಿಂದ ಪ್ರವಾಸಿಗರು ಮೈಸೂರಿಗೆ ದಾಂಗುಡಿ ಇಡುತ್ತಿದ್ದಾರೆ. ವಾಯು ಸೇನೆಯ ವಿವಿಧ ಯುದ್ಧ ವಿಮಾನಗಳು, ಲಘು ವಿಮಾನಗಳು ಏರ್ ಶೋ ನಲ್ಲಿ ಭಾಗವಹಿಸಲಿದ್ದು, ವಾಯುಸೇನೆಯ ಯೋಧರಿಂದ ಸಾಹಸ ಪ್ರದರ್ಶನ ನಡೆಯಲಿದೆ. ಇಂದು ಪಾಸ್ ಹೊಂದಿರುವವರಿಗೆ ಮಾತ್ರ ಒಳಗೆ ಅವಕಾಶ ನೀಡಲಾಗುತ್ತದೆ.