ಬೆಂಗಳೂರು: ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವಕ್ಕೆ ದಿನಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಯಲಹಂಕ ವ್ಯಾಪ್ತಿಯ ವಾಯುಸೇನಾ ನೆಲೆ(Air Force Station)ಯಲ್ಲಿ ಫೆ.2 ರಿಂದ 14ರವರೆಗೆ ಅಂತರಾಷ್ಟ್ರೀಯ ಮಟ್ಟದ ‘ಏರ್ ಇಂಡಿಯಾ-2025(AERO INDIA) ನಡೆಯಲಿದೆ.
ಏರ್ ಶೋ-2025ರ ಹಿನ್ನೆಲೆಯಲ್ಲಿ ಯಲಹಂಕ ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್‌ಗಳ ಎತ್ತರವನ್ನು ಫೆ1 ರಿಂದ 14ರವರೆಗೆ ತಗ್ಗಿಸಲು ಹಾಗೂ ಕ್ರೇನ್ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಬಹುಮಹಡಿ ಕಟ್ಟಡಗಳ ಸಂಸ್ಥೆಗಳು/ಅಭಿವೃದ್ಧಿದಾರರಿಗೆ ಬಿಬಿಎಂಪಿ, ನಗರ ಯೋಜನೆ ಉತ್ತರ ವಿಭಾಗದ ಜಂಟಿ ನಿರ್ದೇಶಕರು ಸೂಚನೆ ನೀಡಿದ್ದಾರೆ.
ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಎಲ್ಲಾ ಬೃಹತ್ ಕಟ್ಟಡಗಳು, ನಿಯಮಗಳನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಏರ್‌ಕ್ರಾಪ್ಟ್ 1937ರ ರೂಲ್ 91 ರೀತ್ಯಾ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.