ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧ ಬೆಳೆಸಿದ ಚಾಲಕನೊಬ್ಬ ಜೀವಕ್ಕೆ ಕುತ್ತು ತಂದು ಕೊಂಡ ಘಟನೆ ಚಿಕ್ಕಬಳ್ಳಾಪುರದ ಮೈಲಪ್ಪನಹಳ್ಳಿಯಲ್ಲಿ ನಡೆದಿದೆ.
ಅದೇ ಗ್ರಾಮದ ಮಹಿಳೆಯೊಂದಿಗೆ ಚಾಲಕ ಅಕ್ರಮ ಸಂಬಂಧ ಬೆಳೆಸಿದ್ದು, ಮಹಿಳೆಯ ಪತಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯರು ಬುದ್ಧಿವಾದ ಹೇಳಿದ್ದರೂ ಕೇಳದ ಚಾಲಕ ತನ್ನ ಚಾಳಿ ಮುಂದುವರೆಸಿದ್ದನೆನ್ನಲಾಗಿದೆ.
ಇದರಿಂದ ಆಕ್ರೋಶಗೊಂಡ ಮಹಿಳೆಯ ಪತಿ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದು, ಪರಾರಿಯಾಗಿರುವ ಆಕೆಯ ಗಂಡನ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.