ಬೆಂಗಳೂರು: ಅಕ್ರಮ ಸಂಬಂಧದ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿದ್ದು, ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಬನ್ನೇರುಘಟ್ಟದಲ್ಲಿ ನಡೆದಿದೆ.
ಬನ್ನೇರುಘಟ್ಟ ಸಮೀಪದ ಕರಿಯಪನಹಳ್ಳಿ ನಿವಾಸಿ 32 ವರ್ಷದ ಮಹಿಳೆಯನ್ನು ಪತಿ ರಘು(38) ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ರಘು ಪತ್ನಿ ಮೇಸ್ತ್ರಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು. ಇದೇ ವಿಚಾರವಾಗಿ ದಂಪತಿ ನಡುವೆ ಜಗಳವಾಗುತ್ತಿತ್ತು. ಶನಿವಾರ ಸಂಜೆ ಜಗಳ ತಾರಕಕ್ಕೇರಿದ್ದು, ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪತಿ ರಘು ಬನ್ನೇರುಘಟ್ಟ ಪೊಲೀಸ್ ಠಾಣೆಗೆ ಆಗಮಿಸಿ ಶರಣಾಗಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.