
ನವದೆಹಲಿ: ಕರ್ನಾಟಕ ರಾಜ್ಯ ಸರ್ಕಾರಕ್ಕೆ ಇನ್ನೂ ಹೆಚ್ಚಿನ ಬರ ಪರಿಹಾರ ನೀಡಲು ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರದಿಂದ ಸುಪ್ರೀಂಕೋರ್ಟ್ ಗೆ ಮಂಗಳವಾರ ಅಫಿಡವಿಟ್ ಸಲ್ಲಿಸಲಾಗಿದೆ. ಇದರಿಂದಾಗಿ ಹೆಚ್ಚಿನ ನೆರವು ನಿರೀಕ್ಷಿಸಿದ್ದ ರಾಜ್ಯಕ್ಕೆ ಹಿನ್ನಡೆಯಾಗಿದೆ.
ರಾಜ್ಯ ಸರ್ಕಾರ 18 ಸಾವಿರ ಕೋಟಿ ರೂಪಾಯಿ ಬರ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದು, ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದ ಕಾರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ನಂತರದಲ್ಲಿ ಕೇಂದ್ರದಿಂದ 3454 ಕೋಟಿ ರೂಪಾಯಿ ನೀಡಲಾಗಿದ್ದು, ಬಾಕಿ ಪರಿಹಾರ ಮಂಜೂರಾತಿ ಇಲ್ಲವೆಂದು ಪ್ರಮಾಣ ಪತ್ರ ಸಲ್ಲಿಸಲಾಗಿದೆ.
ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಂಗಳವಾರ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಪೀಠದಲ್ಲಿ ವಿಚಾರಣೆಗೆ ನಿಗದಿಯಾಗಿದ್ದ ಹಿನ್ನೆಲೆ ಕೇಂದ್ರ ಸರ್ಕಾರದಿಂದ ಪ್ರಮಾಣ ಪತ್ರ ಸಲ್ಲಿಸಲಾಗಿದೆ. ಆದರೆ, ಪ್ರಕರಣ ವಿಚಾರಣೆಗೆ ಬರಲಿಲ್ಲ.