ಅಫ್ಘಾನಿಸ್ತಾನದಲ್ಲಿ ತಾಲಿಬಾನಿ ಆಳ್ವಿಕೆ ಶುರುವಾಗ್ತಿದ್ದಂತೆ ಜನರು ದೇಶ ತೊರೆಯುತ್ತಿದ್ದಾರೆ. ಅನೇಕ ಭಾರತೀಯರು, ತಮ್ಮ ತವರಿಗೆ ವಾಪಸ್ ಆಗಿದ್ದಾರೆ. ಆದ್ರೆ ಭಾರತಕ್ಕೆ ವಾಪಸ್ ಆದವರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ.
ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇಂದು 146 ಮಂದಿ, ಕಾಬೂಲ್ ನಿಂದ ದೆಹಲಿಗೆ ಬಂದಿಳಿದಿದ್ದಾರೆ. ಭಾನುವಾರ ವಿಶೇಷ ವಿಮಾನದ ಮೂಲಕ 392 ಮಂದಿಯನ್ನು ಭಾರತಕ್ಕೆ ವಾಪಸ್ ಕರೆತರಲಾಗಿದೆ.
ಅಫ್ಘಾನಿಸ್ತಾನದಲ್ಲಿ ಸುಮಾರು 400 ಭಾರತೀಯರು ಸಿಕ್ಕಿಬಿದ್ದಿದ್ದಾರೆಂದು ಅಂದಾಜಿಸಲಾಗಿದೆ. ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಸರ್ಕಾರ ತಯಾರಿ ನಡೆಸುತ್ತಿದೆ. ಅಮೆರಿಕಾ ಸೇರಿದಂತೆ ಮಿತ್ರ ರಾಷ್ಟ್ರಗಳ ಜೊತೆ ಈ ಬಗ್ಗೆ ಚರ್ಚೆ ನಡೆಸುತ್ತಿದೆ.
ದೇಶದಲ್ಲಿ ಮೊದಲೇ ಕೊರೊನಾ ಸೋಂಕು ಹೆಚ್ಚಾಗ್ತಿದ್ದು, ಅಫ್ಘಾನಿಸ್ತಾನದಿಂದ ಬಂದವರಲ್ಲಿ ಕೊರೊನಾ ಕಾಣಿಸಿಕೊಳ್ತಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.
ಈ ಮಧ್ಯೆ ಅಫ್ಘಾನಿಸ್ತಾನದಲ್ಲಿ ಭಯದ ವಾತಾವಣ ಮುಂದುವರೆದಿದೆ. ಕಾಬೂಲ್ ವಿಮಾನ ನಿಲ್ದಾಣದ ಉತ್ತರ ದ್ವಾರದಲ್ಲಿ ಸೋಮವಾರ ಬೆಳಿಗ್ಗೆ ಅಫ್ಘಾನ್ ಭದ್ರತಾ ಪಡೆಗಳು ಮತ್ತು ಅಪರಿಚಿತ ದಾಳಿಕೋರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಮುಂಜಾನೆ ನಡೆದ ಘಟನೆಯಲ್ಲಿ ಓರ್ವ ಅಫ್ಘಾನ್ ಸೇನಾ ಅಧಿಕಾರಿ ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ.