ಮೈಸೂರು: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಹಂದಿಗಳಲ್ಲಿ ಕಾಣಿಸಿಕೊಳ್ಳುವ ಆಫ್ರಿಕನ್ ಹಂದಿ ಜ್ವರ ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಪ್ರಾಣಿಗಳ ಸಾಗಾಟಕ್ಕೆ ನಿಷೇಧ ಹೇರಲಾಗಿದೆ. ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ವಿಶೇಷ ತಂಡ ರಚನೆ ಮಾಡಿ ತಪಾಸಣೆ ನಡೆಸಲಾಗುತ್ತಿದೆ.
ಬಾವಲಿ ಚೆಕ್ ಪೋಸ್ಟ್ ಗೆ ಹೆಚ್.ಡಿ.ಕೋಟೆ ತಹಶೀಲ್ದಾರ್ ಸಣ್ಣ ರಾಮಪ್ಪ, ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ್ ಹಾಗೂ ಪಶು ಇಲಾಖೆ ನಿರ್ದೇಶಕ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೇರಳದ ಕನಿಚಾರ್ ಗ್ರಾಮದಲ್ಲಿ ಕೆಲದಿನಗಳ ಹಿಂದೆ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕನಿಚಾರ್ ಹಾಗೂ ಮಲೆಯಂಪಾಡಿಯ ಎರಡು ಫಾರ್ಮ್ ಗಳಲ್ಲಿರುವ ಹಂದಿಗಳನ್ನು ಕೊಲ್ಲುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು.