ಬೆಂಗಳೂರು : 2.5 ವರ್ಷದ ಬಳಿಕ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ ಎಂದು ಸಂಸದ, ಸಹೋದರ ಡಿ.ಕೆ. ಸುರೇಶ್ ಭವಿಷ್ಯ ನುಡಿದಿದ್ದಾರೆ.
ಕಾಂಗ್ರೆಸ್ ರಾಜಕಾರಣದಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆಯಾಗುತ್ತಲೇ ಇದೆ. ಕೆಲವರು ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದರೆ, ಕೆಲವರು ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ.
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ ಹಾಗೂ ಸಂಸದ ಡಿ.ಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದು, 2.5 ವರ್ಷದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ. ಆದರೆ, ಕಾಲ ಬರುವವರೆಗೂ ನಾವು ಕಾಯಬೇಕು ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್ ಕನಿಷ್ಠ 20 ಸೀಟುಗಳನ್ನು ಗೆಲ್ಲಬೇಕಾದರೆ ಹೆಚ್ಚುವರಿಯಾಗಿ ಮೂರು ಡಿಸಿಎಂ ಹುದ್ದೆ ಸೃಷ್ಟಿಯಾಗಬೇಕು ಎಂದು ಸಚಿವರೊಬ್ಬರು ಹೈಕಮಾಂಡ್ಗೆ ಬೇಡಿಕೆಯನ್ನು ಇಟ್ಟಿದ್ದರು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಾಗಿತ್ತು.