31 ವರ್ಷಗಳ ನಂತರ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಹಿಂದೂಗಳಿಂದ ಪೂಜೆ ನಡೆಯುತ್ತಿದ್ದು, ಇದರ ಮೊದಲ ವಿಡಿಯೋ ಬಿಡುಗಡೆ ಆಗಿದೆ.
ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಬುಧವಾರ (ಜನವರಿ 31) ಆವರಣದಲ್ಲಿರುವ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜಿಸುವ ಹಕ್ಕನ್ನು ನೀಡುವಂತೆ ಆದೇಶಿಸಿದೆ. ಈ ಮೂಲಕ ಜ್ಞಾನವಾಪಿಯ ವ್ಯಾಸ್ ಜಿ ಅವರ ನೆಲಮಾಳಿಗೆಯಲ್ಲಿ ಹಿಂದೂಗಳು ಪೂಜಿಸುವ ಹಕ್ಕನ್ನು ಪಡೆದಿದ್ದಾರೆ.
ಹಿಂದೂಗಳು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನೆಲಮಾಳಿಗೆಯಲ್ಲಿ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.