ವಲ್ಸಾದ್: ಚಂಡೀಗಢ ವಿಶ್ವವಿದ್ಯಾನಿಲಯ ಮತ್ತು ಐಐಟಿ ಬಾಂಬೆ ನಂತರ ಗುಜರಾತ್ ಸರ್ಕಾರಿ ಶಾಲೆಯಲ್ಲಿ ಅಂತಹುದೇ ಘಟನೆ ಮರುಕಳಿಸಿದೆ.
ದಕ್ಷಿಣ ಗುಜರಾತ್ ನ ವಲ್ಸಾದ್ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯ ಏಕಲವ್ಯ ಕನ್ಯಾ ಸಾಕ್ಷರತಾ ನಿವಾಸ ಶಾಲೆಯ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿದ್ದಾಗ ಹಾಸ್ಟೆಲ್ ಅಡುಗೆಯವರು ಚಿತ್ರೀಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಆರೋಪದ ಗಂಭೀರತೆಯನ್ನು ಪರಿಗಣಿಸಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಸ್ಥಳೀಯ ಅಪರಾಧ ವಿಭಾಗದ ಪೊಲೀಸ್ ಇನ್ಸ್ ಪೆಕ್ಟರ್, ಸ್ಥಳೀಯ ಸಬ್ ಇನ್ಸ್ಪೆಕ್ಟರ್ ಮತ್ತು ಡೆಪ್ಯೂಟಿ ಕಲೆಕ್ಟರ್ ಕೂಡ ಪರಿಶೀಲನೆ ನಡೆಸಿದ್ದಾರೆ.
ಯಾರಾದರೂ ಇಂತಹ ಕೃತ್ಯದಲ್ಲಿ ತೊಡಗಿರುವುದು ಕಂಡುಬಂದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಲ್ಸಾದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜ್ ದೀಪ್ ಸಿಂಗ್ ಝಲಾ ಹೇಳಿದ್ದಾರೆ.