ಬೆಂಗಳೂರು : ರಾಯಚೂರು ಬೆನ್ನಲ್ಲೇ ಬಳ್ಳಾರಿಯಲ್ಲೂ ಹಕ್ಕಿ ಜ್ವರ ಪತ್ತೆಯಾಗಿದ್ದು, ಗಡಿಜಿಲ್ಲೆಗಳಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ.
ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದ್ದು, ಹಕ್ಕಿಜ್ವರ ಶಂಕೆ ಮೂಡಿದೆ. ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿಯಲ್ಲಿ 8 ಕೋಳಿಗಳು ಮೃತಪಟ್ಟಿದೆ.
ಹಕ್ಕಿ ಜ್ವರದಿಂದಲೇ ಕೋಳಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಆಂದ್ರಪ್ರದೇಶ, ತೆಲಂಗಾಣ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಯಚೂರಿನಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
ರಾಯಚೂರಿನ ಮಾನ್ವಿ ಸೇರಿದಂತೆ ಹಲವು ಕಡೆ ಹಕ್ಕಿಗಳು ಸಾವನ್ನಪ್ಪುತ್ತಿದೆ. ಕಾಗೆ, ಪಾರಿವಾಳ ಸೇರಿದಂತೆ ಹಲವು ಪಕ್ಷಿಗಳು ಸಾವನ್ನಪ್ಪುತ್ತಿದೆ.ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ರಾಯಚೂರಿನ ಜನತೆಯಲ್ಲಿ ಆತಂಕ ಮನೆ ಮಾಡಿದೆ.