ನವದೆಹಲಿ: ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಝೆನೆಕಾ ಕಂಪನಿ ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆಯ ತುರ್ತು ಬಳಕೆಗೆ ಶಿಫಾರಸು ಮಾಡಿದ ಬೆನ್ನಲ್ಲೇ ತಜ್ಞರ ಸಮಿತಿಯಿಂದ ಮತ್ತೊಂದು ಲಸಿಕೆಯ ತುರ್ತು ಬಳಕೆಗೆ ಶಿಫಾರಸು ಮಾಡಲಾಗಿದೆ.
ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡುವಂತೆ ತಜ್ಞರ ಸಮಿತಿಯಿಂದ ಶಿಫಾರಸು ಮಾಡಲಾಗಿದೆ.
ಭಾರತ್ ಬಯೋಟೆಕ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲಾ ಮಾತನಾಡಿ, ಕೊವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿಯಾಗಿದ್ದು, ತಜ್ಞರ ಸಮಿತಿ ತುರ್ತು ಬಳಕೆಗೆ ಅನುಮತಿ ನೀಡಲು ಶಿಫಾರಸು ಮಾಡಿದೆ ಎಂದು ಹೇಳಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ರಾಷ್ಟ್ರೀಯ ಔಷಧ ನಿಯಂತ್ರಕದ ವಿಷಯ ತಜ್ಞರ ಸಮಿತಿ ಸಭೆ ನಡೆಸಿ ಎರಡು ಲಸಿಕೆಗಳ ತುರ್ತು ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ)ಗೆ ಶಿಫಾರಸು ಮಾಡಿದ್ದು, ಡಿಸಿಜಿಐ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.
ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಸಂಸ್ಥೆಯಾಗಿರುವ ಪುಣೆ ಮೂಲದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿವೃದ್ಧಿಪಡಿಸಿದೆ.