ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿದೆ. ದೀಪಾವಳಿ ಹಬ್ಬಕ್ಕೆ ಜನರು ಜಾಸ್ತಿ ಪಟಾಕಿ ಸಿಡಿಸಿದ ಹಿನ್ನೆಲೆಯಲ್ಲಿ ದೆಹಲಿಯ ಜನಪಥ್ ನಲ್ಲಿ ಅತಿ ಹೆಚ್ಚು ವಾಯುಮಾಲಿನ್ಯ ಉಂಟಾಗಿದೆ.
ದೀಪಾವಳಿ ಆಚರಣೆಯ ನಂತರ, ದೆಹಲಿಯ ಜನಪಥ್‌ನಲ್ಲಿ ಗಾಳಿಯ ಗುಣಮಟ್ಟವು ‘ಅಪಾಯಕಾರಿ’ ಮಟ್ಟದಲ್ಲಿ ದಾಖಲಾಗಿದೆ. ಪರಿಸರ ಕಾಳಜಿ ಉದ್ದೇಶದಿಂದ ಪಟಾಕಿಗಳನ್ನು ಬ್ಯಾನ್ ಮಾಡಲಾಗಿತ್ತು. ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿತ್ತು. ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ದೀಪಾವಳಿ ಸಂಭ್ರಮದಲ್ಲಿ ಜನ ಎಲ್ಲಾ ರೀತಿಯ ಪಟಾಕಿಗಳನ್ನು ಸಿಡಿಸಿದ್ದರಿಂದ ವಾಯು ಮಾಲಿನ್ಯ ಹೆಚ್ಚಾಗಿದೆ ಎಂದು ಹೇಳಲಾಗಿದೆ.