ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂ. ಸಹಾಯಧನ ನೀಡಲಾಗುತ್ತಿದ್ದು, ಇದೀಗ ಶ್ರಮ ಶಕ್ತಿ ಯೋಜನೆಯಡಿ ಮಹಿಳೆಯರಿಗೆ 50,000 ರೂ.ನೀಡಲಿದೆ.
ಹೌದು, 2023-24ನೇ ಸಾಲಿನಲ್ಲಿ “ಶ್ರಮ ಶಕ್ತಿ” (ವಿಶೇಷ ಮಹಿಳಾ ಯೋಜನೆ) ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ವಿಧವೆ, ವಿಚ್ಚೇದಿತ, ಅವಿವಾಹಿತ ಮಹಿಳೆಯರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ರಾಜ್ಯದ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು. ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು. ಎಲ್ಲಾ ಮೂಲಗಳಿಂದ ಕೌಟುಂಬಿಕ ವಾರ್ಷಿಕ ಆದಾಯ ರೂ.3.50 ಲಕ್ಷ ದೊಳಗಿರಬೇಕು.ಆಸಕ್ತರು ವೆಬ್ ಸೈಟ್ https://kmdconline.karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.
ಶ್ರಮಶಕ್ತಿ ಯೋಜನೆಯ ಮೂಲಕ 50 ಸಾವಿರ ರೂಪಾಯಿ ಸಾಲ ಸೌಲಭ್ಯ ನೀಡಲಾಗುತ್ತಿದೆ. ಇದರಲ್ಲಿ 25,000 ರೂಪಾಯಿಯನ್ನು ಮರು ಪಾವತಿ ಮಾಡಿದ್ರೆ, ಉಳಿದ 25,000 ರೂಪಾಯಿ ಸಹಾಯಧನವನ್ನು ಸರಕಾರವೇ ನೀಡುತ್ತದೆ.