ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ನ ಸತ್ಸಂಗ ಕಾರ್ಯಕ್ರಮಕ್ಕೆ ಆಮ್ ಆದ್ಮಿ ಪಕ್ಷದ ಸಚಿವ ಪಾಲ್ಗೊಂಡಿರುವ ವಿಡಿಯೋ ವೈರಲ್ ಆಗಿದೆ.
ಇದಕ್ಕೂ ಮೊದಲು, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮತ್ತು ಹಿಮಾಚಲ ಸಾರಿಗೆ ಸಚಿವ ಬಿಕ್ರಮ್ ಠಾಕೂರ್ ಅವರು ಸತ್ಸಂಗದಲ್ಲಿ ಭಾಗವಹಿಸಿದ್ದರು. ಇದೀಗ ಆಪ್ನ ಪಂಜಾಬ್ನ ಸಚಿವ ಫೌಜಾ ಸಿಂಗ್ ಸರದಿ. ಸಾಮಾಜಿಕ ಜಾಲತಾಣದಲ್ಲಿ ಇದು ಭಾರಿ ಟೀಕೆಗೆ ಗುರಿಯಾಗಿದೆ.
ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸಿಂಗ್ನನ್ನು 14 ದಿನಗಳ ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಈತ ಆನ್ಲೈನ್ ಮತ್ತು ವೈಯಕ್ತಿಕ ಸತ್ಸಂಗಗಳನ್ನು ನಡೆಸುತ್ತಿದ್ದಾನೆ. ಇದರಲ್ಲಿ ಹಲವಾರು ಸಚಿವರು ಮತ್ತು ನಾಯಕರು ಭಾಗವಹಿಸುತ್ತಾರೆ. ಈತನ ದೊಡ್ಡ ಅಭಿಮಾನಿಗಳು ಹಾಗೂ ಅನುಯಾಯಿಗಳ ಬಳಗ ಇರುವ ಹಿನ್ನೆಲೆಯಲ್ಲಿ ಚುನಾವಣೆಯ ದೃಷ್ಟಿಯಿಂದ ನಾಯಕರು ಹೀಗೆ ಮಾಡುತ್ತಿರುವುದು ಟೀಕೆಗೆ ಗುರಿಯಾಗಿದೆ.