ಕಂದಹಾರ್: ಅಫ್ಘಾನಿಸ್ತಾನದ ಕಂದಹಾರ್‌ನ ಶಿಯಾ ಮಸೀದಿಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದೆ ಸ್ಫೋಟದಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಶುಕ್ರವಾರದ ಪ್ರಾರ್ಥನಾ ಸೇವೆಯಲ್ಲಿ ಸಾಮಾನ್ಯವಾಗಿ ಹೆಚ್ಚಿನ ಭಕ್ತರು ಮಸೀದಿಯಲ್ಲಿ ಪಾಲ್ಗೊಳ್ಳುತ್ತಾರೆ. ಈ ವೇಳೆ ಸ್ಫೋಟ ಸಂಭವಿಸಿದೆ.
ಅಫ್ಘಾನಿಸ್ತಾನದ ಕುಂಡುಜ್ ನಗರದ ಸೈದ್ ಅಬಾದ್ ಮಸೀದಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ, 100ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಒಂದು ವಾರದ ನಂತರ ಮತ್ತೆ ಸ್ಫೋಟ ಸಂಭವಿಸಿದೆ. ಯುಎಸ್ ಪಡೆಗಳು ಅಫ್ಘಾನಿಸ್ತಾನವನ್ನು ತೊರೆದ ನಂತರ ಇದು ಅತ್ಯಂತ ಭೀಕರ ದಾಳಿಯಾಗಿದೆ.
ಇಸ್ಲಾಮಿಕ್ ಸ್ಟೇಟ್ ಆಫ್ ಖೊರಾಸನ್ ಪ್ರಾಂತ್ಯವು (ಐಎಸ್ ಕೆಪಿ) ಈ ಮಾರಣಾಂತಿಕ ದಾಳಿಯ ಹೊಣೆ ಹೊತ್ತಿದೆ. ಇಸ್ಲಾಮಿಕ್ ಸ್ಟೇಟ್ ಗುಂಪಿನ ಪ್ರಾದೇಶಿಕ ಅಂಗಸಂಸ್ಥೆ ಐಎಸ್ ಕೆಪಿ ಅನ್ನು ಅಫ್ಘಾನಿಸ್ತಾನದ ಎಲ್ಲಾ ಜಿಹಾದಿ ಭಯೋತ್ಪಾದಕ ಗುಂಪುಗಳಲ್ಲಿ ಅತ್ಯಂತ ಹಿಂಸಾತ್ಮಕ ಸಂಘಟನೆ ಎಂದು ಪರಿಗಣಿಸಲಾಗಿದೆ.