ನವದೆಹಲಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿ ಅತ್ಯಾಚಾರ ನಡೆಸಿದ ಘಟನೆಗೆ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿತ್ತು, ಈ ಘಟನೆ ಮಾಸುವ ಮುನ್ನವೇ ಪಶ್ಚಿಮ ಬಂಗಾಳದಲ್ಲಿ ಕೆಲವು ದಿನಗಳ ಹಿಂದೆ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಗೊಳಿಸಿ ಚಿತ್ರಹಿಂಸೆ ನೀಡಲಾಗಿದೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಆರೋಪಿಸಿದೆ.
ಮಹಿಳೆಯರನ್ನು ಬೆತ್ತಲೆಗೊಳಿಸಿ ಚಿತ್ರಹಿಂಸೆ ನೀಡಲಾಗಿದೆ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ಪಶ್ಚಿಮ ಬಂಗಾಳದಲ್ಲಿ ಮಾಲ್ಡಾದ ಬಮಂಗೋಲಾ ಪೊಲೀಸ್ ಠಾಣೆಯ ಪಕುವಾ ಹ್ಯಾಟ್ ಪ್ರದೇಶದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಗೊಳಿಸಿ, ಚಿತ್ರಹಿಂಸೆ ನೀಡಿ ನಿರ್ದಯವಾಗಿ ಥಳಿಸಲಾಗಿದೆ” ಎಂದು ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಟ್ವಿಟ್ಟರ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಬಿಜೆಪಿಯನ್ನು ಗುರಿಯಾಗಿಸಿಕೊಂಡಿವೆ. ಜನಾಂಗೀಯ ಘರ್ಷಣೆಗಳ ನಡುವೆ ಮಣಿಪುರದಲ್ಲಿ ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಬೆತ್ತಲೆ ಮೆರವಣಿಗೆ ನಡೆಸಿದ ವೀಡಿಯೊ ವೈರಲ್ ಆದ ಬೆನ್ನಲ್ಲೇ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಈ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಘಟನೆ ನಡೆದಿದೆ.