alex Certify BREAKING: ಸಿಎಂ ಬಳಿಕ ʼಭಾರತ ವಿಕಾಸ ಸಂಗಮ ಸಂಸ್ಥೆʼ ಆಯೋಜಿಸಿದ ಕಾರ್ಯಕ್ರಮದಿಂದ ಹಿಂದೆ ಸರಿದ ಮತ್ತೊಬ್ಬ ಸಚಿವರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿಎಂ ಬಳಿಕ ʼಭಾರತ ವಿಕಾಸ ಸಂಗಮ ಸಂಸ್ಥೆʼ ಆಯೋಜಿಸಿದ ಕಾರ್ಯಕ್ರಮದಿಂದ ಹಿಂದೆ ಸರಿದ ಮತ್ತೊಬ್ಬ ಸಚಿವರು

ʼಭಾರತ ವಿಕಾಸ ಸಂಗಮ ಸಂಸ್ಥೆʼ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಿದ್ದು, ಇದರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಲಿದ್ದಾರೆಂದು ಹೇಳಲಾಗಿತ್ತು. ಅಲ್ಲದೇ ಈ ಕುರಿತು ಆಹ್ವಾನ ಪತ್ರಿಕೆಗಳೂ ಮುದ್ರಣವಾಗಿದ್ದವು

ಆದರೆ ಇದು ರಾಷ್ಟ್ರೀಯ ಸ್ವಯಂ ಸೇವಕ ಸಂಘದವರ ಅಂಗಸಂಸ್ಥೆಯ ಕಾರ್ಯಕ್ರಮ. ಹೀಗಾಗಿ ಇದಕ್ಕೆ ಹೋಗಬಾರದೆಂದು ಕೆಲವರಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದ್ದು,  ಇದೀಗ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಇದರ ಮಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದ ಸಚಿವರಾದ ಪ್ರಿಯಾಂಕ್‌ ಖರ್ಗೆ ತಾವೂ ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲವೆಂದು ಹೇಳಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವರು ಪೋಸ್ಟ್‌ ಹಾಕಿದ್ದು, ಭಾರತ ವಿಕಾಸ ಸಂಗಮ ಸಂಸ್ಥೆ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಎಂಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವುದನ್ನು ಮಾಧ್ಯಮಗಳ ಮೂಲಕ ಗಮನಿಸಿದೆ. ನನಗೆ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ, ನನಗೆ ಆಹ್ವಾನವೂ ಬಂದಿಲ್ಲ. ನನಗೆ ಆಹ್ವಾನ ನೀಡದೆಯೇ ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿ ಹಂಚುವುದು ಸಮಂಜಸವಲ್ಲ ಎಂದು ಹೇಳಿದ್ದಾರೆ. ಈ ಮೂಲಕ ತಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂಬುದನ್ನು ಸೂಚಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...