ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ್ದು, ಈ ಬೆಳವಣಿಗೆಯ ನಂತರ ಬಾಂಗ್ಲಾದೇಶ ಸೇನಾ ವಶಕ್ಕೆ ಒಳಪಟ್ಟಿದೆ.
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನವಾದ ಬಳಿಕ ಬಾಂಗ್ಲಾದೇಶವನ್ನು ನಾವು ವಶಕ್ಕೆ ಪಡೆದಿದ್ದೇವೆ ಎಂದು ಸೇನಾ ಮುಖ್ಯಸ್ಥ ಹೇಳಿದ್ದಾರೆ. ಈ ಮೂಲಕ ಇದೀಗ ಬಾಂಗ್ಲಾ ಸೇನೆ ಆಡಳಿತಕ್ಕೆ ಒಳಪಟ್ಟಿದೆ.ಶೇಖ್ ಹಸೀನಾ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಇದೀಗ ಭಾರತ, ನೆರೆ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.
ಬಾಂಗ್ಲಾದೇಶದ ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ನಡೆಸಿದ ಪ್ರತಿಭಟನೆ, ಹಿಂಸಾಚಾರದಲ್ಲಿ ಇದುವರೆಗೆ 300 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ಎಲ್ಲಾ ಬೆಳವಣಿಗೆಯ ನಂತರ ಶೇಖ್ ಹಸೀನಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಸುರಕ್ಷಿತ ಸ್ಥಳಕ್ಕೆ ಫಲಾಯನ ಮಾಡಿದ್ದಾರೆ. ಮೂಲಗಳ ಪ್ರಕಾರ ಬಾಂಗ್ಲಾದೇಶದ ಪ್ರಧಾನಿ ಭಾರತಕ್ಕೆ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ.