ಕೊಡಗು: ಧಾರಾಕಾರ ಮಳೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮತ್ತೆ ಭೂಕಂಪವಾಗುತ್ತಿದ್ದು, ಜನರು ಕ್ಷಣ ಕ್ಷಣಕ್ಕೂ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.
ಮಡಿಕೇರಿ ತಾಲೂಕಿನ ಚೆಂಬು, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಮನೆಯಲ್ಲಿದ್ದ ಜನರು ಆತಂಕದಿಂದ ಹೊರಗೋಡಿ ಬಂದಿದ್ದಾರೆ.
ಕಳೆದ ಕೆಲ ದಿನಗಳಿಂದ ಕೊಡಗಿನಲ್ಲಿ ಪದೇ ಪದೇ ಭೂಕಂಪ ಸಂಭವಿಸುತ್ತಿದ್ದು, ಇದು ಈ ಭಾಗದಲ್ಲಿ ಸಂಭವಿಸಿದ 10ನೇ ಭೂಕಂಪವಾಗಿದೆ.