ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭಾರಿ ಭೂಕಂಪ ಸಂಭವಿಸಿದ್ದು, ಜಿಲ್ಲೆಯ ಜನರು ಬೆಚ್ಚಿ ಬಿದ್ದಿದ್ದಾರೆ. ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆ ದಾಖಲಾಗಿದೆ.
ವಿಜಯಪುರದಲ್ಲಿ ನಿನ್ನೆ ಕೂಡ ಭೂಕಂಪ ಸಂಭವಿಸಿತ್ತು. ಇದರ ಬೆನ್ನಲ್ಲೇ ಇಂದು ಮತ್ತೆ ಭೂಕಂಪವಾಗಿದ್ದು, ಪದೇ ಪದೇ ಸಂಭವಿಸುತ್ತಿರುವ ಭೂಕಂಪನದಿಂದಾಗಿ ಜನರು ಭಯಭೀತರಾಗಿದ್ದಾರೆ.
ಬಿಜಯಪುರ ನಗರ, ಬಸವನಬಾಗೇವಾಡಿ, ಗೋಳಗುಮ್ಮಟ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದೆ. ಇಂದು ಸಂಭವಿಸಿದ ಭೂಕಂಪನದ ಕೇಂದ್ರ ಬಿಂದು ಹಂಚಿನಾಳದಲ್ಲಿತ್ತು ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.