ಚಿಕ್ಕಮಗಳೂರು: ಚಿಕ್ಕಮಗಳೂರಿನ ದತ್ತಪೀಠದ ಆವರಣದಲ್ಲಿ ಮತ್ತೆ ಮಾಂಸಾಹಾರ ಸೇವನೆ ಮಾಡಿರುವುದು ಪತ್ತೆಯಾಗಿದ್ದು, ಹಿಂದೂಪರ ಸಂಘಟನೆಗಳು ಜಿಲ್ಲಾಡಳಿತದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.
ದತ್ತಪೀಠದ ಆವರಣದಲ್ಲಿ ಹೋಮ-ಹವನಕ್ಕಾಗಿ ನಿರ್ಮಿಸಿರುವ ತಾತ್ಕಾಲಿಕ ಶೆಡ್ ನಲ್ಲಿ ಮಾಂಸಾಹಾರ ಸೇವನೆ ಮಾಡಲಾಗಿದೆ. ಈ ಮೂಲಕ ಭಾವೈಕ್ಯತೆ ಕೇಂದ್ರದಲ್ಲಿ ಪದೇ ಪದೇ ಹಿಂದೂಗಳ ಭಾವನೆಗೆ ಧಕ್ಕೆಯುಂಟು ಮಾಡಲಾಗುತ್ತಿದೆ. ಕಳೆದ 6 ತಿಂಗಳ ಹಿಂದೆ ಇಂಥದ್ದೇ ಘಟನೆ ನಡೆದಿತ್ತು. ಆಗ ಜಿಲ್ಲಾಡಳಿತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ಆದರೆ ಈಗ ಮತ್ತೆ ದತ್ತಪೀಠ ಆವರಣದಲ್ಲಿ ಮಂಸಾಹಾರ ಸೇವನೆ ಮಾಡಲಾಗಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗದೇ ಕಣ್ಮುಚ್ಚಿ ಕುಳಿತಿದೆ ಎಂದು ಹಿಂದೂ ಬ್ರಿಗೇಡ್ ಕಾರ್ಯಕರ್ತರು ಕಿಡಿಕಾರಿದ್ದಾರೆ.
ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯವೇ ಘಟನೆ ಮತ್ತೆ ಮರುಕಳಿಸಲು ಕಾರಣ. ಇನ್ಮುಂದೆ ನಾವೇ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಹಿಂದೂ ಬ್ರಿಗೆಡ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.