
ಬೆಂಗಳೂರು: ಪ್ರೌಢಶಾಲೆ ಶಿಕ್ಷಕರ ನೇಮಕಾತಿ ವಯೋಮಿತಿ ಎರಡು ವರ್ಷ ಹೆಚ್ಚಳ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಸಿಬ್ಬಂದಿ ಹುದ್ದೆ ಬರ್ತಿಗೆ ಎರಡು ವರ್ಷ ವಯೋಮಿತಿ ಹೆಚ್ಚಳದ ಸಂಬಂಧ ಪ್ರಸ್ತಾವನೆ ಸ್ವೀಕೃತವಾಗಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಜತೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಎಸ್.ವಿ. ಸಂಕನೂರ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಸಚಿವರು ಉತ್ತರ ನೀಡಿದ್ದಾರೆ. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ 2022 ರಲ್ಲಿ ಎರಡು ವರ್ಷಗಳ ವಯೋಮಿತಿ ಹೆಚ್ಚಳ ಮಾಡಲಾಗಿದೆ. ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಎರಡು ವರ್ಷ ವಯೋಮಿತಿ ಹೆಚ್ಚಳ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಜತೆಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದ್ದಾರೆ.