ಬೆಂಗಳೂರು: ಕೊರೋನಾ ಸೇರಿದಂತೆ ವಿವಿಧ ಕಾರಣಗಳಿಂದ ನೇಮಕಾತಿ ವಿಳಂಬವಾದ ಹಿನ್ನೆಲೆಯಲ್ಲಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿ ವೇಳೆ ಒಂದು ಬಾರಿಗೆ ಸೀಮಿತವಾಗಿ ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಕೆ.ಪಿ.ಎಸ್.ಸಿ. ಹೊರಡಿಸಿದ 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಆಕಾಂಕ್ಷಿಗಳಾದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಬದಲಿಗೆ ಗರಿಷ್ಠ ವಯೋಮಿತಿಯನ್ನು 38 ವರ್ಷಕ್ಕೆ ಹೆಚ್ಚಳ ಮಾಡಲಾಗಿದೆ.
ಪ್ರವರ್ಗ 2ಎ, 2ಬಿ, 3ಎ, 3ಬಿಗೆ 38 ವರ್ಷ ಇದ್ದ ಗರಿಷ್ಠ ವಯೋಮಿತಿಯನ್ನು 41 ವರ್ಷಕ್ಕೆ ಸಡಿಲಿಕೆ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ 40 ವರ್ಷದಿಂದ 43 ವರ್ಷಕ್ಕೆ ವಯೋಮಿತಿ ಹೆಚ್ಚಳ ಮಾಡಲಾಗಿದ್ದು, ಒಂದು ಬಾರಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಹೇಳಲಾಗಿದೆ.