ಕಲಬುರಗಿ: ಕಲಬುರಗಿ ಅಂಚೆ ವಿಭಾಗದ(ಕಲಬುರಗಿ ಮತ್ತು ಯಾದಗಿರಿ ಜಿಲ್ಲೆ) ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ವ್ಯವಹಾರಕ್ಕಾಗಿ ಅಂಚೆ ಜೀವ ವಿಮೆ ಏಜೆಂಟರನ್ನು ನೇಮಕ ಮಾಡಿಕೊಳ್ಳಲು ಇದೇ ಜುಲೈ 15 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಗತ್ ವೃತ್ತದ ಹತ್ತಿರವಿರುವ ಕಲಬುರಗಿ ಅಂಚೆ ವಿಭಾಗ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಅಭ್ಯರ್ಥಿಗಳ ವಯೋಮಿತಿ 18 ರಿಂದ 50 ವರ್ಷದೊಳಗಿರಬೇಕು. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಹ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಮೇಲ್ಕಂಡ ದಿನದಂದು ನೇರವಾಗಿ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ 08472-263800 ಹಾಗೂ ಮೊಬೈಲ್ ಸಂಖ್ಯೆ 9886248554ಗೆ ಸಂಪರ್ಕಿಸಲು ಕೋರಲಾಗಿದೆ.