
ನವದೆಹಲಿ: ಎರಡು ದಿನಗಳಲ್ಲಿ ಅಗ್ನಿಪಥ್ ಯೋಜನೆಯಡಿ ನೇಮಕಾತಿ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಯೋಜನೆ ವಿರೋಧಿ ಪ್ರತಿಭಟನೆ ನಡುವೆಯೇ ಎರಡು ದಿನಗಳಲ್ಲಿ ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರರನ್ನು ನೇಮಕಾ ಮಾಡಿಕೊಳ್ಳಲು ಚಾಲನೆ ನೀಡಲಾಗುವುದು.
ಅಗ್ನಿಪಥ್ ನೇಮಕಾತಿ ಯೋಜನೆ ವಿರೋಧಿಸಿ ಉತ್ತರದ ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ, ಹಿಂಸಾಚಾರ ನಡೆದಿದೆ. ಯೋಜನೆ ವಿರುದ್ಧ ಸಾವಿರಾರು ಯುವಕರು ಬೀದಿಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥ ಮನೋಜ್ ಪಾಂಡೆ ಮಹತ್ವದ ಮಾಹಿತಿ ನೀಡಿದ್ದಾರೆ. ಮುಂದಿನ 2 ದಿನಗಳಲ್ಲಿ http://joinindianarmy.nic.in ನಲ್ಲಿ ಅಧಿಸೂಚನೆ ಹೊರಡಿಸಲಾಗುವುದು. ಇದರ ನಂತರ, ಮಿಲಿಟರಿ ನೇಮಕಾತಿಗೆ ಸಂಬಂಧಿಸಿದ ಸಂಸ್ಥೆಗಳು ನೋಂದಣಿ ಮತ್ತು ನೇಮಕಾತಿ ವೇಳಾಪಟ್ಟಿಯನ್ನು ಪ್ರಕಟಿಸುತ್ತವೆ ಎಂದು ಹೇಳಿದ್ದಾರೆ.