ನವದೆಹಲಿ: ಭಾರತದ ಬತ್ತಳಿಕೆಗೆ ಬ್ರಹ್ಮಾಸ್ತ್ರವೇ ಸಿಕ್ಕಿದೆ. ಐಸಿಬಿಎಂ ಅಗ್ನಿ-5 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಪ್ರಯೋಗ ನಡೆಸಲಾಗಿದೆ. 5000 ಕಿಲೋ ಮೀಟರ್ ದೂರ ಕ್ರಮಿಸಬಲ್ಲ ಸಾಮರ್ಥ್ಯದ ಅಗ್ನಿ-5 ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದೆ. ಏಷ್ಯಾದ ಮೂಲೆಮೂಲೆಗೂ ತಲುಪಬಲ್ಲ ಸಾಮರ್ಥ್ಯವನ್ನು ಅಗ್ನಿ-5 ಕ್ಷಿಪಣಿ ಹೊಂದಿದೆ.
5,000-8000 ಕಿ.ಮೀ ಸ್ಟ್ರೈಕ್ ರೇಂಜ್ ಹೊಂದಿರುವ ಅಣ್ವಸ್ತ್ರ ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-5 ಅನ್ನು ಒಡಿಶಾ ಕರಾವಳಿಯ ಡಾ ಅಬ್ದುಲ್ ಕಲಾಂ ದ್ವೀಪದಿಂದ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ.
ಮೂರು ಹಂತದ ಘನ ಇಂಧನ ಎಂಜಿನ್ ಅನ್ನು ಬಳಸುವ ಕ್ಷಿಪಣಿಯು 5,000 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಗುರಿಗಳನ್ನು ಅತಿ ಹೆಚ್ಚು ನಿಖರತೆಯೊಂದಿಗೆ ಹೊಡೆಯುವ ಸಾಮರ್ಥ್ಯವನ್ನು ಹೊಂದಿದೆ. ‘ಮೊದಲ ಬಳಕೆಯಿಲ್ಲ’ ಎಂಬ ಬದ್ಧತೆ ಹೊಂದಿರುವ ಭಾರತದ ನೀತಿಗೆ ಅನುಗುಣವಾಗಿ ಅಗ್ನಿ-5 ಕ್ಷಿಪಣಿ ಯಶಸ್ವಿ ಪರೀಕ್ಷೆ ನಡೆಸಲಾಗಿದೆ.