ಭೋಪಾಲ್ : ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ಸೋಮವಾರ ಬೆಳಿಗ್ಗೆ ಭಸ್ಮ ಆರತಿ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 13 ಜನರು ಗಾಯಗೊಂಡಿದ್ದಾರೆ. ಭೀಕರ ಅಗ್ನಿ ಅವಘಡದ ವಿಡಿಯೋ ವೈರಲ್ ಆಗಿದೆ.
ಗಾಯಗೊಂಡ ನಾಲ್ವರನ್ನು ಇಂದೋರ್ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನೀರಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಆರತಿ ಸಮಯದಲ್ಲಿ, ಯಾರೋ ಅರ್ಚಕ ಸಂಜೀವ್ ಅವರ ಮೇಲೆ ಹಿಂದಿನಿಂದ ಗುಲಾಲ್ ಸುರಿದಿದ್ದು, ಇದರಿಂದಾಗಿ ಅದು ದೀಪದ ಮೇಲೆ ಬಿದ್ದಿತು ಎಂದು ವರದಿಯಾಗಿದೆ. ಗುಲಾಲ್ ನಲ್ಲಿರುವ ಶಂಕಿತ ರಾಸಾಯನಿಕಗಳು ಬೆಂಕಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಘಟನೆಯಲ್ಲಿ 13 ಮಂದಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರನ್ನು ಚಿಕಿತ್ಸೆಗಾಗಿ ಇಂದೋರ್ ಗೆ ಕಳುಹಿಸಲಾಗಿದೆ ಎಂದು ಉಜ್ಜಯಿನಿ ಜಿಲ್ಲಾಧಿಕಾರಿ ನೀರಜ್ ಸಿಂಗ್ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲು ಆದೇಶ ಹೊರಡಿಸಲಾಗಿದ್ದು, ಈ ಉದ್ದೇಶಕ್ಕಾಗಿ ಸಮಿತಿಯನ್ನು ರಚಿಸಲಾಗಿದೆ. ಉಳಿದ ಗಾಯಾಳುಗಳು ಉಜ್ಜಯಿನಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.