ಭಾರತೀಯ ನೌಕಾಪಡೆಯು ಅಗ್ನಿಪಥ್ ನೇಮಕಾತಿ ಯೋಜನೆಯಡಿಯಲ್ಲಿ ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆ ಪ್ರಾರಂಭಿಸಿದೆ.
ಆಸಕ್ತಿ ಇರುವ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ joinindiannavy.gov.in ಮೂಲಕ ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಅಗ್ನಿವೀರ್ 2022 ಬ್ಯಾಚ್ಗೆ 23 ವರ್ಷಗಳವರೆಗೆ ಗರಿಷ್ಠ ವಯಸ್ಸಿನ ಮಿತಿಯ ಒಂದು ಬಾರಿ ಸಡಿಲಿಕೆಯನ್ನು ನೀಡಲಾಗಿದೆ ಎಂಬುದು ಮಹತ್ವದ ಸಂಗತಿಯಾಗಿದೆ.
ನೌಕಾಪಡೆಯ ಅಗ್ನಿವೀರ್ಗೆ ಅರ್ಜಿ ಸಲ್ಲಿಸುವುದು ಹೇಗೆಂದರೆ, ಮೊದಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ, ಮುಖಪುಟದಲ್ಲಿ, ನೋಂದಣಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ಮಾಹಿತಿ ನಮೂದಿಸಬೇಕು.
ನಿಮ್ಮ ನೋಂದಣಿ ಸಂಖ್ಯೆ ಅಥವಾ ಇಮೇಲ್ ಐಡಿ ಮತ್ತು ಪಾಸ್ವರ್ಡ್ ಬಳಸಿ ವೆಬ್ಸೈಟ್ಗೆ ಲಾಗಿನ್ ಮಾಡಿ. ‘ಕರೆಂಟ್ ಅಪರ್ಚುನಿಟಿ’ ಮೇಲೆ ಕ್ಲಿಕ್ ಮಾಡಿ ಮತ್ತು ಅಗ್ನಿವೀರ್ ನೇಮಕಾತಿ ಆಯ್ಕೆಮಾಡಿ
ಅಗ್ನಿವೀರ್ ನೇಮಕಾತಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಭಾರತೀಯ ನೌಕಾಪಡೆಯ ಅಗ್ನಿವೀರ್ ನೋಂದಣಿಗಾಗಿ ನಿಮ್ಮ ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಡೌನ್ಲೋಡ್ ಮಾಡಿ, ಮುಂದಿನ ದಿನಗಳಲ್ಲಿ ಉಲ್ಲೇಖಗಳಿಗಾಗಿ ಮುದ್ರಿಸಿ ತೆಗೆದುಕೊಳ್ಳಿ.
ಭಾರತೀಯ ನೌಕಾಪಡೆಯ ಅಗ್ನಿವೀರ್ ನೇಮಕಾತಿಗೆ ಹಾಜರಾಗುವ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲು ಪರಿಗಣಿಸಲಾಗುತ್ತದೆ. ದೈಹಿಕ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗುತ್ತದೆ.
ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳನ್ನು ನೇಮಕಾತಿ ವೈದ್ಯಕಿಯ ಪರೀಕ್ಷೆಗಾಗಿ ಐಎನ್ಎಸ್ ಚಿಲ್ಕಾಗೆ ಕರೆಯಲಾಗುವುದು. ಅಭ್ಯರ್ಥಿ ಆಹ್ವಾನ ಪತ್ರದಲ್ಲಿ ನಮೂದಿಸಲಾದ ದಿನಾಂಕ ಮತ್ತು ಸಮಯದಲ್ಲಿ ವರದಿ ಮಾಡಲು ವಿಫಲವಾದಲ್ಲಿ ಅಭ್ಯರ್ಥಿ ಆಯ್ಕೆಯು ರದ್ದುಗೊಳ್ಳುತ್ತದೆ ಎಂದು ಭಾರತೀಯ ನೌಕಾಪಡೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಭರ್ತಿ ಮಾಡುವಾಗ ಅಪ್ಲೋಡ್ ಮಾಡಿದ ಮೂಲ ದಾಖಲೆಗಳು ಅಂದರೆ ಮೂಲ ಪ್ರಮಾಣಪತ್ರಗಳು, ಮಾರ್ಕ್ಶೀಟ್ಗಳು, ನಿವಾಸ ಪ್ರಮಾಣಪತ್ರ ಮತ್ತು ಎನ್ಸಿಸಿ ಪ್ರಮಾಣಪತ್ರ (ಹೊಂದಿದ್ದರೆ) ತರಬೇಕು. ಆನ್ಲೈನ್ ಅಪ್ಲಿಕೇಶನ್ನಲ್ಲಿ ಒದಗಿಸಲಾದ ವಿವರಗಳು ಯಾವುದೇ ಹಂತದಲ್ಲಿ ಮೂಲ ದಾಖಲೆಗಳೊಂದಿಗೆ ಹೊಂದಿಕೆಯಾಗದಿದ್ದರೆ, ಉಮೇದುವಾರಿಕೆಯನ್ನು ರದ್ದುಗೊಳಿಸಲಾಗುವುದು ಎಂದು ಭಾರತೀಯ ನೌಕಾಪಡೆ ತಿಳಿಸಿದೆ.