ಭಾರತೀಯ ವಾಯುಪಡೆಯು 2022 ನೇ ಸಾಲಿನ ನೇಮಕಾತಿಗಾಗಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಅಗ್ನಿವೀರರನ್ನು(Airforce Staff) ನೇಮಕಾತಿ ಮಾಡಿಕೊಳ್ಳಲು ಅರ್ಹ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ದ್ವಿತೀಯ ಪಿ.ಯು.ಸಿ. ಅಥವಾ ಡಿಪ್ಲೋಮಾದಲ್ಲಿ ಶೇ.50 ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು ಹಾಗೂ ಆಂಗ್ಲ ಭಾಷೆಯಲ್ಲಿ ಶೇ.50 ಅಂಕ ಪಡೆದಿರಬೇಕು.
ವಯೋಮಿತಿ: ಅಭ್ಯರ್ಥಿಗಳು 1999 ಡಿಸೆಂಬರ್ 29ರಿಂದ ಜೂನ್ 29, 2005ರೊಳಗೆ ಜನಿಸಿರಬೇಕು.(23 ವರ್ಷ)
ಪರೀಕ್ಷಾ ಶುಲ್ಕ: 250 ರೂ. ಆಗಿದ್ದು, https://agnipathvayu.cdac.in ವೆಬ್‍ಸೈಟ್ ನಲ್ಲಿ ನೋಂದಾಯಿಸಿಕೊಳ್ಳಬಹುದು. ನೋಂದಣಿಗೆ ಜು.5 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ವೆಬ್‍ಸೈಟ್: https://indianairforce.nic.in ಮತ್ತು https://careerindianairforce.cdac.in ಹಾಗೂ ಮೊ. 8073365184, 9019692898. ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.