ನವದೆಹಲಿ: ಹೊಸ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ್’ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಕೇಂದ್ರ ಸರ್ಕಾರ ನೇಮಕಾತಿ ವಯೋಮಿತಿಯನ್ನು 21 ವರ್ಷಗಳಿಂದ 23 ವರ್ಷಗಳಿಗೆ ವಿಸ್ತರಿಸುವ ಮೂಲಕ ಯೋಜನೆಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಒಂದು ಬಾರಿ ವಿನಾಯಿತಿ ನೀಡಿದೆ. ರಕ್ಷಣಾ ಸಚಿವಾಲಯದ ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ ಯಾವುದೇ ನೇಮಕಾತಿ ನಡೆಯದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಅಗ್ನಿಪಥ್ ಯೋಜನೆಯ ಪ್ರಾರಂಭದ ಪರಿಣಾಮವಾಗಿ, ಸಶಸ್ತ್ರ ಪಡೆಗಳಲ್ಲಿ ಎಲ್ಲಾ ಹೊಸ ನೇಮಕಾತಿಗಳ ವಯಸ್ಸನ್ನು 17 ½ – 21 ವರ್ಷಗಳು ಎಂದು ನಿಗದಿಪಡಿಸಲಾಗಿತ್ತು ಎಂದು ಸಚಿವಾಲಯ ತಿಳಿಸಿದೆ.
ಬಿಹಾರ, ಉತ್ತರ ಪ್ರದೇಶ, ಹರಿಯಾಣ, ಮಧ್ಯಪ್ರದೇಶ ಮತ್ತು ಇತರ ಹಲವು ರಾಜ್ಯಗಳು ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರೋಧಿಸಿ ತೀವ್ರತರ ಪ್ರತಿಭಟನೆಗಳಿಗೆ ಸಾಕ್ಷಿಯಾಗಿವೆ.