alex Certify Viral Video | ಗೆಳೆಯನೊಂದಿಗೆ ವಾಗ್ವಾದ; ನೋಡನೋಡುತ್ತಲೇ ರೈಲಿನ ಮುಂದೆ ಹಾರಿ ಪ್ರಾಣ ಬಿಟ್ಟ ಯುವತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Viral Video | ಗೆಳೆಯನೊಂದಿಗೆ ವಾಗ್ವಾದ; ನೋಡನೋಡುತ್ತಲೇ ರೈಲಿನ ಮುಂದೆ ಹಾರಿ ಪ್ರಾಣ ಬಿಟ್ಟ ಯುವತಿ

Agra: Girl Jumps in Front of Kerala Express Train After Quarrel With Boyfriend; Disturbing CCTV Video Surfaces

ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ನೋಡುಗರ ಎದೆ ನಡುಗಿಸುವಂತಿದೆ. ತನ್ನ ಗೆಳೆಯನ ಜೊತೆ ವಾಗ್ವಾದ ಮಾಡುತ್ತಿದ್ದ ಯುವತಿಯೊಬ್ಬಳು ನೋಡ ನೋಡುತ್ತಿದ್ದಂತೆ ರೈಲಿನ ಮುಂದೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ.

ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆಗ್ರಾದ ರಾಜಾ ಕಿ ಮಂಡಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಫ್ಲಾಟ್ ಫಾರಂ ಸಂಖ್ಯೆ ಒಂದರಲ್ಲಿ ಯುವತಿಯೊಬ್ಬಳು ತನ್ನ ಗೆಳೆಯನ ಜೊತೆ ಕುಳಿತಿರುತ್ತಾಳೆ. ಇಬ್ಬರ ನಡುವೆ ಯಾವುದೋ ಕಾರಣಕ್ಕೆ ಪರಸ್ಪರ ವಾಗ್ವಾದ ನಡೆಯುತ್ತಿರುತ್ತದೆ. ಈ ಸಂದರ್ಭದಲ್ಲಿ ಏಕಾಏಕಿ ಎದ್ದು ನಿಂತ ಆಕೆ ರೈಲ್ವೆ ಟ್ರ್ಯಾಕಿನ ಮೇಲೆ ಹಾರಿ ವಾಗ್ವಾದ ಮುಂದುವರಿಸಿದ್ದಾಳೆ.

ಈ ಸಂದರ್ಭದಲ್ಲಿ ಯುವತಿ ಹಾರಿದ್ದ ಟ್ರ್ಯಾಕಿನ ಮೇಲೆ ಕೇರಳ ಎಕ್ಸ್ಪ್ರೆಸ್ ರೈಲು ವೇಗವಾಗಿ ಬಂದಿದ್ದು, ಕೊನೆ ಕ್ಷಣದಲ್ಲಿ ಇದನ್ನು ಗಮನಿಸಿದ ಯುವತಿ ಫ್ಲಾಟ್ ಫಾರ್ಮ್ ಮೇಲೆ ಹೋಗಲು ಯತ್ನಿಸಿದರೂ ಸಹ ಸಾಧ್ಯವಾಗದೆ ಆಕೆಯ ಮೇಲೆ ರೈಲು ಹರಿದು ಹೋಗಿದೆ.

ಇದರ ಪರಿಣಾಮ ಆಕೆ ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಅಪಘಾತದ ಘಟನೆಯ ದೃಶ್ಯಾವಳಿ ಫ್ಲಾಟ್ ಫಾರಂ ನಂಬರ್ ಒಂದರಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...