alex Certify SHOCKING: ಪತ್ನಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಪತ್ನಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ ಪತಿ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿಯ ಅರ್ಸೆನಾ ಗ್ರಾಮದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ಜುಲೈ 14ರಂದು ಸಿಕಂದರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬುಧವಾರದಂದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿತ್ತು. ಇದು ಪೊಲೀಸರ ಗಮನಕ್ಕೂ ಬಂದಿದ್ದು, ಆದರೆ ಅಷ್ಟರಲ್ಲಾಗಲೇ ಆರೋಪಿ ಪರಾರಿಯಾಗಿದ್ದ.

ತನ್ನ ಪತ್ನಿ ಕುಸುಮಾಳನ್ನು ಥಳಿಸಿದ ಆರೋಪಿ ಶ್ಯಾಮ್ ಬಿಹಾರಿ ಹಾಗೂ ಈ ಕೃತ್ಯಕ್ಕೆ ಸಹಕರಿಸಿದ ಆತನ ತಾಯಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯಾವ ಕಾರಣಕ್ಕೆ ಆರೋಪಿ ತನ್ನ ಪತ್ನಿಯನ್ನು ಥಳಿಸಿದ ಎಂಬುದು ಬಹಿರಂಗವಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...