
ಮಂಗಳೂರು: ನಿವೃತ್ತ ಅರಣ್ಯಾಧಿಕಾರಿಯಿಂದ ಲಂಚ ಪಡೆಯುತ್ತಿದ್ದ ಕೃಷಿ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಕೃಷಿ ವಿಭಾಗದ ಉಪನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಬಲೆಗೆ ಬಿದ್ದವರು. ಆಗಸ್ಟ್ 31ರಂದು ವಲಯ ಅರಣ್ಯಾಧಿಕಾರಿಯಾಗಿ ನಿವೃತ್ತರಾಗಿದ್ದ ಎನ್.ಪಿ. ಪರಮೇಶ್ವರ್ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಸಸಿ ಖರೀದಿ ಬಾಕಿ ಪಾವತಿ ಪ್ರಕರಣದಲ್ಲಿ ಒಂದು ಲಕ್ಷ ರೂಪಾಯಿ ಲಂಚಕ್ಕೆ ಭಾರತಮ್ಮ ಬೇಡಿಕೆ ಇಟ್ಟಿದ್ದು, ಶನಿವಾರ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.