ಭಾರತ ಕೃಷಿ ಪ್ರಧಾನ ದೇಶ. ಕೃಷಿ ಭಾರತದ ಆರ್ಥಿಕತೆಯ ಒಂದು ಭಾಗ. ಭಾರತದ ಜನಸಂಖ್ಯೆಯ ಶೇಕಡಾ 70 ರಷ್ಟು ಜನರು ಕೃಷಿಯನ್ನು ಮಾತ್ರ ಅವಲಂಬಿಸಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗ ಲಭ್ಯವಿದೆ.
ಸರ್ಕಾರಿ ಮತ್ತು ಖಾಸಗಿ ವಲಯದ ಕೃಷಿ ಇಲಾಖೆಯಲ್ಲಿ ಅನೇಕ ಉದ್ಯೋಗಾವಕಾಶಗಳಿವೆ. ಕೃಷಿ ಇಲಾಖೆಯಲ್ಲಿ ಕೆಲಸ ಮಾಡಲು ಬಯಸಿದವರು, ಉದ್ಯೋಗ ಜಾಹೀರಾತುಗಳನ್ನು ನೋಡ್ತಿರಬೇಕು. ಅನೇಕ ಕೃಷಿ ಶಾಖೆಗಳಲ್ಲಿ, ಅಗತ್ಯಕ್ಕೆ ಅನುಗುಣವಾಗಿ ಕಾಲಕಾಲಕ್ಕೆ ನೇಮಕಾತಿಗಳನ್ನು ಮಾಡಲಾಗುತ್ತದೆ.ಇದರ ಮಾಹಿತಿಯನ್ನು ಉದ್ಯೋಗ ಪತ್ರಿಕೆಗಳು ಮತ್ತು ದಿನಪತ್ರಿಕೆಗಳಲ್ಲಿ ನೀಡಲಾಗುತ್ತದೆ.
ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕ ನಡೆಯುತ್ತದೆ. ಅಗ್ರಿಕಲ್ಚರ್ ಫೀಲ್ಡ್ ಆಫೀಸರ್,ಬ್ಯಾಂಕ್ ನಲ್ಲಿ ಕೆಲಸ ಮಾಡಬೇಕು. ರೈತರಿಗೆ ಸಾಲ ನೀಡುವುದ್ರಿಂದ ಹಿಡಿದು, ಸಾಲದ ಬಗ್ಗೆ ಮಾಹಿತಿ, ಸಾಲ ವಸೂಲಿ, ರೈತರಿಗೆ ಹೊಸ ಯೋಜನೆ ಬಗ್ಗೆ ಮಾಹಿತಿ ಸೇರಿದಂತೆ ಅನೇಕ ಕೆಲಸಗಳನ್ನು ಮಾಡಬೇಕಾಗುತ್ತದೆ. ಕೃಷಿ ಮೇಲ್ವಿಚಾರಕರು ರೈತರಿಗೆ ಹೊಸ ತಂತ್ರಜ್ಞಾನ, ಬೆಳೆಗಳು ಮತ್ತು ರಸಗೊಬ್ಬರಗಳ ಬಗ್ಗೆ ಮಾಹಿತಿ ನೀಡುತ್ತಾರೆ.
ಕೃಷಿ ಇಲಾಖೆಯಲ್ಲಿ ಉದ್ಯೋಗ ಪಡೆಯಲು, ಮಾನ್ಯತೆ ಪಡೆದ ಕಾಲೇಜಿನಲ್ಲಿ ಕೃಷಿ ಕ್ಷೇತ್ರದಲ್ಲಿ ಪದವೀಧರರಾಗಿರಬೇಕು. ಇದರಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು 18 ರಿಂದ 40 ವರ್ಷದೊಳಗಿರಬೇಕು. ಇದರಲ್ಲಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಮತ್ತು ಎಸ್ಸಿ/ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗುತ್ತದೆ.