ಬಳ್ಳಾರಿ: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಜೋಳ(ನೀ), ಕಡಲೆ (ನೀ/ಮ)ಹಾಗೂ ಬೇಸಿಗೆ ಹಂಗಾಮಿನ ಗ್ರಾಮಪಂಚಾಯಿತಿ ಮಟ್ಟದ ಬೆಳೆಗಳಾದ ನೆಲಗಡಲೆ(ಶೇಂಗಾ)(ನೀ), ಭತ್ತ (ನೀ), ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ಬೆಳೆಗಳಾದ ಮುಸುಕಿನ ಜೋಳ(ನೀ), ಸೂರ್ಯಕಾಂತಿ(ನೀ/ಮ) ಕುಸುಮೆ(ಮ), ಈರುಳ್ಳಿ(ನೀ), ಮತ್ತು ಬೇಸಿಗೆ ಹಂಗಾಮಿನ ಸೂರ್ಯಕಾಂತಿ(ನೀ), ಈರುಳ್ಳಿ (ನೀ) ಜಿಲ್ಲೆಯ ಬೆಳೆಗಳಾಗಿವೆ.
ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ನಿಗದಿ ಪಡಿಸಲಾಗಿದೆ. ಹಿಂಗಾರು ಹಂಗಾಮಿನ ಬೆಳೆಗಳಾದ-ಜೋಳ(ನೀ), ಮುಸುಕಿನ ಜೋಳ (ನೀ)- ಡಿ.16 ಮತ್ತು ಕಡಲೆ(ನೀ/ಮ)-ಡಿ.31. ಸೂರ್ಯಕಾಂತಿ (ನೀ/ಮ) ಹಾಗೂ ಕುಸುಮೆ (ಮ)-ಡಿ.16. ಬೇಸಿಗೆ ಬೆಳೆಗಳಾದ ಭತ್ತ (ನೀ), ನೆಲಗಡಲೆ (ಶೇಂಗಾ), ಸೂರ್ಯಕಾಂತಿ (ನೀ), ಈರುಳ್ಳಿ (ನೀ) 2025ರ ಫೆ.28ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್‌ಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.