ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವುದರಿಂದ ಜೂನ್ 27ರಿಂದ ಸೆ. 15 ರವರೆಗೆ ಸದರಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು(ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸಲಾಗಿದೆ.
ಬದಲಿ ಮಾರ್ಗ
ತೀರ್ಥಹಳ್ಳಿ-ಉಡುಪಿ ತೀರ್ಥಹಳ್ಳಿ-ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ-ಉಡುಪಿ,
ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ,
ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿರುವ ವರದಿಯಲ್ಲಿ ರಾಷ್ಟ್ರೀಯ ಹೆದ್ದಾರಿ-169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಬಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ವರದಿ ಪಡೆದುಕೊಂಡಿದ್ದು, ಇದರ ಅನ್ವಯ ಆಗುಂಬೆ ಘಾಟಿಯಲ್ಲಿ ತಾತ್ಕಾಲಿಕವಾಗಿ ದಿನಾಂಕ:27:6.2024 ರಿಂದ ದಿನಾಂಕ: 15.9.2024ರವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.