
ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಮತ್ತು ಕರಾವಳಿ ಉಡುಪಿ ಜಿಲ್ಲೆ ಸಂಪರ್ಕಿಸುವ ಆಗುಂಬೆ ಘಾಟಿ ರಸ್ತೆಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತಗೊಂಡಿದೆ.
ಮೂರನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಕಾರಣ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ರಸ್ತೆಗೆ ಅಡ್ಡಲಾಗಿ ಬಿದ್ದ ಮರ ತೆರವುಗೊಳಿಸಲು ಕಾರ್ಯಾಚರಣೆ ನಡೆಸಲಾಗಿದೆ. ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಚಾರದಟ್ಟಣೆ ಉಂಟಾಗಿದೆ. ಮರ ತೆರವುಗೊಳಿಸುವ ಕಾರ್ಯಾಚರಣೆ ಭರದಿಂದ ಸಾಗಿದೆ.