ಲಕ್ನೋ: ಉತ್ತರ ಪ್ರದೇಶ ಬಿಜೆಪಿ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ನೀಡಲಾಗಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷದ ಸಂಘಟನೆ ಉದ್ದೇಶದೊಂದಿಗೆ 30 ಲಕ್ಷ ಕಾರ್ಯಕರ್ತರಿಗೆ ಉಡುಗೊರೆ ನೀಡಲಾಗಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೂತ್ ಮಟ್ಟದಲ್ಲಿ ನಿರ್ವಹಣೆಗಾಗಿ ಕಾರ್ಯಕರ್ತರು ಉತ್ಸಾಹದಿಂದ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಕೊಡುಗೆ ನೀಡಲಾಗುತ್ತಿದೆ. ಪಕ್ಷ ಸಂಘಟನೆ ಮತ್ತು ಚುನಾವಣೆಯಲ್ಲಿ ಪ್ರಮುಖವಾಗಿರುವ ಬೂತ್ ಮಟ್ಟದ ಕಾರ್ಯಕರ್ತರಿಗೆ ಬಾಗಿಲ ತೋರಣ ಮತ್ತು ಕಮಲದ ಆಕೃತಿಯ ಮಣ್ಣಿನ ದೀಪಗಳನ್ನು ಒಳಗೊಂಡ ಬಾಕ್ಸ್ ಗಳನ್ನು ವಿತರಿಸಲಾಗುತ್ತಿದೆ.
ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯ ಬಹದ್ದೂರ್ ಪಾಠಕ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, 30 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರಿಗೆ ಉಡುಗೊರೆ ಕಳುಹಿಸಲಾಗಿದೆ ಎಂದು ಹೇಳಿದ್ದು, ಕಮಲದ ದೀಪಗಳು ಬೆಳಗಿದಾಗ ಕತ್ತಲೆ ಮಾಯವಾಗುತ್ತದೆ. ಪ್ರಧಾನಿ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರಂಭಿಸಿದ ಅಭಿವೃದ್ಧಿ ಯೋಜನೆಗಳು ಬಲವಾಗುತ್ತವೆ ಎಂದು ತಿಳಿಸಿದ್ದಾರೆ.