ದೇಶದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ಗುಜರಾತ್ ನ ಅಹಮದಾಬಾದ್ ನಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿಗೆ ತರಲಾಗಿದೆ. ಮುನ್ಸಿಪಲ್ ಕಾರ್ಪೊರೇಶನ್ ಆಸ್ಪತ್ರೆಗಳಲ್ಲಿ ಉಚಿತ ಹೆರಿಗೆ ಸೌಲಭ್ಯದಲ್ಲಿ ಬದಲಾವಣೆ ಮಾಡಲಾಗ್ತಿದೆ.
ನಗರದ ಆಸ್ಪತ್ರೆಗಳಲ್ಲಿ 2 ಮಕ್ಕಳ ಹೆರಿಗೆಗೆ ಉಚಿತ ಸೌಲಭ್ಯ ನೀಡಲು ನಿರ್ಧರಿಸಲಾಗಿದೆ. ಮೂರನೇ ಮಗುವಿನ ಹೆರಿಗೆಗೆ ಶುಲ್ಕ ಪಾವತಿಸಬೇಕಾಗುತ್ತದೆ. ಸ್ಥಳೀಯ ಮುಖಂಡ ಭಾಸ್ಕರ್ ಭಟ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ನಗರಸಭೆಯ ಎಲ್ಲಾ ಆಸ್ಪತ್ರೆಗಳಲ್ಲಿ ಈ ನಿಯಮ ಜಾರಿಗೆ ಬರಲಿದೆ. 2 ಮಕ್ಕಳ ನಂತ್ರ ಮೂರನೇ ಮಗು ಜನಿಸಿದ್ರೆ ಹೆರಿಗೆಗೆ ಶುಲ್ಕ ಪಾವತಿ ಮಾಡಬೇಕೆಂದು ಅವರು ಹೇಳಿದ್ದಾರೆ. ಹೆರಿಗೆಗೆ ಎಷ್ಟು ಶುಲ್ಕ ವಿಧಿಸಲಾಗ್ತಿದೆ ಎನ್ನುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಬಿಜೆಪಿ ಅಧಿಕಾರದಲ್ಲಿರುವ ಈ ಪ್ರದೇಶದಲ್ಲಿ ಶುಲ್ಕ ವಿಚಾರ ಈಗ ಚರ್ಚೆಗೆ ಕಾರಣವಾಗಿದೆ.
ಇನ್ನು ಗುಜರಾತ್‌ನಲ್ಲಿ 13 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಇದರ ನಂತ್ರ ಒಟ್ಟು ಸೋಂಕಿತರ ಸಂಖ್ಯೆ 8,25,435 ಕ್ಕೆ ಏರಿದೆ. ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಈ ಮಾಹಿತಿಯನ್ನು ನೀಡಿದ್ದಾರೆ. ಸಾವಿನ ಸಂಖ್ಯೆ 10,081 ಆಗಿದೆ.